ಮಹಾಶಿವರಾತ್ರಿ ಹಬ್ಬ : ಓಂ ನಮಃ ಶಿವಾಯ
ಮಹಾ ಶಿವರಾತ್ರಿ ಹಬ್ಬವನ್ನು ಮಾಘ ಮಾಸದ ಬಹುಳ/ಕೃಷ್ಣ ಪಕ್ಷದಲ್ಲಿ ಚತುರ್ದಶಿಯಂದು ಆಚರಿಸಲಾಗುತ್ತದೆ. ಚತುರ್ದಶಿ ತಿಥಿಯು ರಾತ್ರಿಯಲ್ಲಿ ಇರಬೇಕು. ಈ ದಿನ ಬೆಳಿಗ್ಗೆ ಮಂಗಳ ಸ್ನಾನ ಮಾಡಿ, ಈಶ್ವರನಿಗೆ ಷೋಡಶೋಪಚಾರದಿಂದ ಪೂಜೆಮಾಡಬೇಕು. ಈ ದಿನದ ವಿಶೇಷ ಪೂಜಾ ಸಾಮಾಗ್ರಿ ಬಿಲ್ವ ಪತ್ರೆ . ಬಿಲ್ವ ಪತ್ರೆ ಈಚ್ವರನಿಗೆ ಪ್ರಿಯವಾದುದ್ದು. ಇದರ ಒಂದು ಎಲೆಯನ್ನು ಶಿವನಿಗೆ ಅರ್ಪಿಸಿದರೂ ನಾನಾ ಪುಣ್ಯಗಳಿಗೆ ಪಾತ್ರರಗುತ್ತೀವಿ ಅಂಬ ನಂಬಿಕೆ ಇದೆ. ಶಿವಲಿಂಗಕ್ಕೆ ಪಂಚಾಮೃತ ಮತ್ತು ಬಿಲ್ವ ಪತ್ರೆ ಸಮರ್ಪಣೆ ಮಾಡುತ್ತಾರೆ. ಸಾಮಾನ್ಯವಾಗಿ ಇಡೀ ದಿನ ಉಪವಾಸವಿದ್ದು, ರಾತ್ರಿ ಜಾಗರಣೆ ಮಾಡಿ ಮಾರನೆಯ ದಿನ ಪಾರಣೆ ಮಾಡಬೇಕು. ಉಪವಾಸ ಮಾಡಲು ಆಗದಿದ್ದರೆ, ಫಲಹಾರ ಮಾಡುತ್ತಾರೆ. ಶಿವ ರಾತ್ರಿ ಎಂಬ ಹೆಸರಿಗೆ ತಕ್ಕಂತೆ ಹಗಲಿನ ಜೊತೆಗೆ ರಾತ್ರಿಯೂ ಶಿವನ ಪೂಜೆ, ಆರಾಧನೆಮಾಡುತ್ತಾರೆ. ಜಾವ ( ಯಾಮ) - ದಿವಸದ ಎಂಟನೆಯ ಒಂದು ಭಾಗದಷ್ಟು ಕಾಲ, ಮೂರು ಗಂಟೆ ಕಾಲ ಎಂದರ್ಥ. ರಾತ್ರಿಯ 4 ಜಾವಗಳಲ್ಲೂ ಈಶ್ವರನಿಗೆ ಅಭಿಷೇಕ ಪೂಜೆ ಮಾಡುತ್ತಾರೆ. ಈಶ್ವರನ ಭಜನೆ, ಹಾಡು, ಸ್ತೋತ್ರಗಳನ್ನು ಹೇಳುತ್ತಾ ಜಾಗರಣೆ ಮಾಡುತ್ತಾರೆ. ಹೀಗೆ ದಿನವಿಡೀ ಶಿವನ ಧ್ಯಾನದಲ್ಲಿ ಕಳೆಯಬೇಕು. ನಮ್ಮ ಮನೆಯಲ್ಲಿ ಶಿವರಾತ್ರಿ ದೊಡ್ಡ ಹಬ್ಬ. ಈ ದಿನ ಸಾಮಾನ್ಯವಾಗಿ ಈಶ್ವರ ದೇವಾಲಯಗಳಲ್ಲಿ ರಾತ್ರಿ ಇಡೀ ಪ...